Total Rs. 0
Full Information of an Event
Back to Home | Other News
ಕೊಲ್ಲೂರು: ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ - ರಥೋತ್ಸವ ಮಾ. 30
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಾ. 30ರಂದು ನಡೆಯಲಿರುವ ಮನ್ಮಹಾರಥೋತ್ಸವದ ಅಂಗವಾಗಿ ಮಾ. 23ರಂದು ಬೆಳಗ್ಗೆ ಗಣಪತಿ ಪ್ರಾರ್ಥನೆ, ನಾಂದಿ, ಪುಣ್ಯಾಹ, ಅಂಕುರಾದಿವಾಸ, ಸಿಂಹಯಾಗದೊಡನೆ ಧ್ವಜಾರೋಹಣ ನಡೆಯಿತು.

ದೇಗುಲದ ಅರ್ಚಕ ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಕಾರ್ಯನಿರ್ವಹಣಾಧಿಕಾರಿ ಟಿ.ಆರ್‌. ಉಮ, ಉಪ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಅಧೀಕ್ಷಕ ರಾಮಕೃಷ್ಣ ಅಡಿಗ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಅಡಿಗ, ತಾ.ಪಂ. ಮಾಜಿ ಸದಸ್ಯ ರಮೇಶ ಗಾಣಿಗ ಕೊಲ್ಲೂರು, ಅರ್ಚಕ, ಕ್ಷೇತ್ರ ಪುರೋಹಿತರು ಹಾಗೂ ಭಕ್ತರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಮಾ. 23ರಿಂದ ಮಾ. 31ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಪ್ರತಿ ದಿನ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ದೇಗುಲದ ಕಾರ್ಯನಿರ್ವಹಣಾಧಿಧಿಕಾರಿ ಟಿ.ಆರ್‌. ಉಮ ತಿಳಿಸಿದ್ದಾರೆ.

ಈ ಬಾರಿಯ ರಥೋತ್ಸವ ಉಡುಪಿ ಜಿಲ್ಲಾಧಿಧಿಕಾರಿ ಹಾಗೂ ಕೊಲ್ಲೂರು ದೇಗುಲದ ಆಡಳಿತಾಧಿಧಿಕಾರಿ ಆಗಿರುವ ಡಾ| ವಿಶಾಲ್‌ ನೇತೃತ್ವದಲ್ಲಿ ನಡೆಯಲಿದ್ದು, ಆಗಮಿಸುವ ಭಕ್ತರಿಗೆ ಸಕಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪೊಲೀಸ್‌, ಕಂದಾಯ, ಆರೋಗ್ಯ ಸಮೇತ ವಿವಿಧ ಇಲಾಖೆ ಅಧಿಧಿಕಾರಿಗಳು ವ್ಯವಸ್ಥೆಯಲ್ಲಿ ಲೋಪವಾಗದಂತೆ ಕಾಳಜಿ ವಹಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ವಾಹನ ನಿಲುಗಡೆ ಹಾಗೂ ಸಂಚಾರ ವ್ಯವಸ್ಥೆಯಲ್ಲಿ ಕಿರಿಕಿರಿಯಾಗದಂತೆ ನೋಡಿಕೊಳ್ಳಲು ವಿಶೇಷ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.
Back to Home | Other News